ಸ್ವಾಭಿಮಾನಿ ಕಲ್ಯಾಣ ಪರ್ವ ಅ.19ಕ್ಕೆ

pressmeet photo
Published on

ಬೀದರ್: ಬಸವ ಧರ್ಮ ಪೀಠದ ಸ್ವಾಭಿಮಾನಿ ಶರಣರ ಬಳಗದ ವತಿಯಿಂದ ಅ.19 ಮತ್ತು 20 ರಂದು ಬಸವಕಲ್ಯಾಣದ ಸಸ್ತಾಪುರ ಬಂಗ್ಲಾ ಬಳಿಯ ಬೇಗ್ ಕಲ್ಯಾಣ ಮಂಟಪದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಬಸವ ಗಂಗೋತ್ರಿ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಶ್ರೀ ಡಾ.ಚನ್ನಬಸವಾನಂದ ಸ್ವಾಮೀಜಿ ಹೇಳಿದರು.
ಎರಡು ದಿನ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಸಾರ್ವಜನಿಕರು ಪಾಲ್ಗೊಳ್ಳುತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅ.19 ರಂದು ಬೆಳಗ್ಗೆ 5ಕ್ಕೆ ಇಷ್ಟಲಿಂಗ ಪೂಜೆ, 11ಕ್ಕೆ ಉದ್ಘಾಟನೆ ಸಮಾರಂಭ ಜರುಗಲಿದೆ. ಸಂಜೆ 5ಕ್ಕೆ ಧರ್ಮ ಚಿಂತನ ಗೋಷ್ಠಿ ನಡೆಯಲಿದೆ. ಅ.20ರಂದು ಬೆಳಗ್ಗೆ 8ಕ್ಕೆ ಸಾಮೂಹಿಕ ಪ್ರಾರ್ಥನೆ, ಇಷ್ಟಲಿಂಗ ಪೂಜೆ, ಬೆಳಗ್ಗೆ 10.30ಕ್ಕೆ ಶರಣ ವಂದನೆ, ಮಧ್ಯಾಹ್ನ 12ಕ್ಕೆ ಮಹಿಳಾ ಗೋಷ್ಠಿ, ಮ.3ಕ್ಕೆ ಯುವ ಗೋಷ್ಠಿ ಹಾಗೂ ಸಾಯಂಕಾಲ ಸಮಾರೋಪ ಇದೆ. ಈ ಭಾಗದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಬಸವ ಮಂಟಪದ ಸಂಚಾಲಕಿ ಪೂಜ್ಯ ಸತ್ಯಾದೇವಿ ಮಾತಾಜಿ ಮಾತನಾಡಿ, ಸ್ವಾಭಿಮಾನಿ ಕಲ್ಯಾಣ ಪರ್ವ ಎಂದರೆ ಇದೊಂದು ಕಲ್ಯಾಣದ ಹಬ್ಬ. ಇದರಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದರು.
ಪ್ರಮುಖರಾದ ಶಿವರಾಜ ಪಾಟೀಲ್ ಅತಿವಾಳ, ಬಸವಂತರಾವ ಬಿರಾದಾರ್, ರವಿಕಾಂತ ಬಿರಾದಾರ್, ಮಲ್ಲಿಕಾರ್ಜುನ ಶೆಂಬೆಳ್ಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net