

ಬೀದರ್: ಶಿಕ್ಷಣ ರಂಗದಲ್ಲಿ ಅವಿರತ ಸೇವೆ ಸಲ್ಲಿಸಿದ ಶಿಕ್ಷಕ ಅಶೋಕ ಪಾಟೀಲ್ ಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ನಗರದ ಬೆಲ್ದಾಳೆ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ತಾಲೂಕಿನ ರಾಜನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಪಾಟೀಲ್ ಗೆ ಸನ್ಮಾನಿಸಿ ಪ್ರಮಾಣಪತ್ರ ನೀಡಿ ಗೌರವಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.