ವಸತಿ ರಹಿತರ ಬೇಡಿಕೆಗೆ ಸ್ಪಂದನೆ

Rajkukumar Halburge
Published on

ಬೀದರ್: ಸಂಸದ ಸಾಗರ್ ಖಂಡ್ರೆ ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಯಡಿ ಜಿಲ್ಲೆಗೆ ಅಧಿಕ ಸಂಖ್ಯೆಯ ಮನೆಗಳನ್ನು ಮಂಜೂರು ಮಾಡಿಸಿ ವಸತಿ ರಹಿತರ ಬೇಡಿಕೆಗೆ ಸ್ಪಂದಿಸಿದ್ದಾರೆ ಎಂದು ಔರಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬುರ್ಗೆ ತಿಳಿಸಿದ್ದಾರೆ.
ಔರಾದ್ ತಾಲ್ಲೂಕಿಗೆ 2,286, ಕಮಲನಗರ ತಾಲ್ಲೂಕಿಗೆ 1,637 ಮನೆಗಳನ್ನು ಮಂಜೂರು ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.
ಸಂಸದರ ಕಾರ್ಯವು ಬಡವರಲ್ಲಿ ಸಂತಸ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net