ಮಕ್ಕಳಿಗೆ ಬದುಕಿನ ಸೂತ್ರ ಕಲಿಸಿ

Arunodaya School Photo
Published on

ಬೀದರ್: ಶಿಕ್ಷಕರು ಮಕ್ಕಳಿಗೆ ಪಠ್ಯದ ಜತೆಗೆ ಬದುಕಿನ ಸೂತ್ರವನ್ನೂ ಕಲಿಸಬೇಕು ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜಶೇಖರ ಮಂಗಲಗಿ ಹೇಳಿದರು.

ಋಷಿಕೇಶ ಶಿಕ್ಷಣ ಸಂಸ್ಥೆಯ ಸಂಚಾಲಿತ ನಗರದ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ನೈತಿಕ, ಮಾನವೀಯ ಮೌಲ್ಯಗಳನ್ನು ಹೇಳಿಕೊಡಬೇಕು. ಜೀವನದಲ್ಲಿ ಎದುರಾಗುವ ಸಮಸ್ಯೆ, ಸವಾಲುಗಳನ್ನು ತಾಳ್ಮೆಯಿಂದ  ಹೇಗೆ ಪರಿಹರಿಸಿಕೊಳ್ಳಬೇಕೆಂಬ ಬಗೆಯನ್ನು ತಿಳಿಸಬೇಕು. ಅವರಲ್ಲಿ ಜೀವನೋತ್ಸಾಹ ತುಂಬಬೇಕು ಎಂದರು. 

ಅಧ್ಯಕ್ಷತೆ ವಹಿಸಿದ್ದ ಋಷಿಕೇಶ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ ಮಾತನಾಡಿ, ಜೀವನದಲ್ಲಿ ಗುರುವಿನ ಪಾತ್ರ ಬಹಳ ಮಹತ್ವದ್ದಾಗಿದೆ. ಗುರುವಿನ ಮಾರ್ಗದರ್ಶನವಿದ್ದರೆ ಎಂತಹ ಗುರಿಯನ್ನು ಸಹ ತಲುಪಬಹುದು ಎಂದು ಹೇಳಿದರು. 

ವಿದ್ಯಾರ್ಥಿನಿ ನಮ್ರತಾ ಚಂದ್ರಪ್ಪ ಮಾತನಾಡಿದರು.

ಪ್ರೀತಿ ನೀಲಕಂಠ ಸ್ವಾಗತಿಸಿದರು. ಭಾಗ್ಯಶ್ರೀ ರಮೇಶ, ಅನಿತಾ ರಾಜಕುಮಾರ ನಿರೂಪಿಸಿದರು. ಅಭಿಷೇಕ ಚಂದ್ರಕಾಂತ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net