ಬೀದರ್‍ಗೆ ಬಂಪರ್ ಕೊಡುಗೆ

Narsappa Yakatpur
Published on

ಬೀದರ್: ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಬೀದರ್ ಜಿಲ್ಲೆಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದೆ ಎಂದು ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ನರಸಪ್ಪ ಯಾಕತಪುರ ಹೇಳಿದ್ದಾರೆ.
ಬೀದರ್ ನಗರಸಭೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ, ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ ನಿರ್ಮಾಣಕ್ಕೆ ಒಪ್ಪಿಗೆ, ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ರೂ. 15 ಕೋಟಿ ಅನುದಾನ ಮೊದಲಾದವು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿವೆ ಎಂದು ತಿಳಿಸಿದ್ದಾರೆ.
ಬೀದರ್ ಜಿಲ್ಲೆಗೆ ಮಹತ್ವದ ಯೋಜನೆಗಳನ್ನು ಘೋಷಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸದಸ್ಯರಿಗೆ ಧನ್ಯವಾದ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net