

ಬಸವಕಲ್ಯಾಣ: ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಿರುವುದಕ್ಕೆ ಕಾಂಗ್ರೆಸ್ ಮುಖಂಡ ಧನರಾಜ ತಾಳಂಪಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ.
ಹುಲಸೂರದಲ್ಲಿ ನೂತನ ಆಡಳಿತ ಸೌಧ ನಿರ್ಮಾಣಕ್ಕೆ 8.60 ಕೋಟಿ ರೂ., ಕಂದಾಯ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇತರ ಇಲಾಖೆ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.