ರಾಜ್ಯಕ್ಕೆ ಆಯ್ಕೆಯಾಗುವ ಮಕ್ಕಳಿಗೆ ಬಹುಮಾನ

sports - Copy
filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Auto; cct_value: 0; AI_Scene: (-1, -1); aec_lux: 0.0; hist255: 0.0; hist252~255: 0.0; hist0~15: 0.0;
Published on

ಔರಾದ್: ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ 21 ಸಾವಿರ ರೂ. ಬಹುಮಾನ ಹಾಗೂ ಕ್ರೀಡಾ ಸಮವಸ್ತ್ರಗಳನ್ನು ವೈಯಕ್ತಿಕವಾಗಿ ನೀಡುವುದಾಗಿ ಶಾಸಕ ಪ್ರಭು ಚವ್ಹಾಣ್ ಘೋಷಿಸಿದರು.
ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದಡಿ ಪಟ್ಟಣದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಅವರು, ತಾಲೂಕು ಮಟ್ಟದಲ್ಲಿ ಗೆಲುವು ಸಾಧಿಸಿ ವಿಭಾಗೀಯ ಮತ್ತು ರಾಜ್ಯ ಮಟ್ಟದಲ್ಲಿ ಮಕ್ಕಳು ಮಿಂಚಬೇಕು. ಅವರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಹುಮಾನ ನೀಡುವೆ ಎಂದರು.
ಕ್ರೀಡೆಗಳಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಬಹುದು. ಉತ್ತಮ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿಯಾಗಿದ್ದು, ಮಕ್ಕಳು ಓದಿನೊಂದಿಗೆ ಕ್ರೀಡೆಗಳಲ್ಲಿಯೂ ಭಾಗವಹಿಸಬೇಕೆಂದು ಕಿವಿಮಾತು ಹೇಳಿದರು.
ಔರಾದ್ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಿಸಿದೆ. ರಾಜ್ಯದ ವಿವಿಧೆಡೆ ನಮ್ಮ ತಾಲೂಕಿನವರು ಐಎಎಸ್, ಐಪಿಎಸ್, ವೈದ್ಯಾಧಿಕಾರಿಗಳು ಸೇರಿ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅಂಥವರನ್ನು ಪ್ರೇರಣೆಯಾಗಿಸಿಕೊಂಡು ಮಕ್ಕಳು ದೊಡ್ಡ ಗುರಿಯೊಂದಿಗೆ ಅಭ್ಯಾಸ ಮಾಡಬೇಕು ಎಂದು ತಿಳಿಹೇಳಿದರು.
ಶಿಕ್ಷಣ ಕ್ಷೇತ್ರದ ಅಭ್ಯುದಯ ನನ್ನ ಮೊದಲ ಆದ್ಯತೆಯಾಗಿದೆ. ಬಹುದಿನಗಳ ಬೇಡಿಕೆಯಾಗಿದ್ದ ಹೊರಾಂಗಣ ಕ್ರೀಡಾಂಗಣ ನಿರ್ಮಿಸಿ ಕಂಪೌಂಡ್ ಹಾಗೂ ಅಗತ್ಯ ಸೌಕರ್ಯ ಒದಗಿಸಲಾಗಿದೆ. ರಸ್ತೆ ನಿರ್ಮಿಸಬೇಕೆಂಬ ಬೇಡಿಕೆಗೂ ಶೀಘ್ರದಲ್ಲಿ ಸ್ಪಂದಿಸಲಾಗುವುದು ಎಂದರು.
ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ಬಿಇಒ ಸುಧಾರಾಣಿ, ದೈಹಿಕ ಶಿಕ್ಷಣ ಪರಿವೀಕ್ಷಕ ಜೋಯಲ್ ಜೈರಾಜ್, ಪ್ರಮುಖರಾದ ರಾಮಶೆಟ್ಟಿ ಪನ್ನಾಳೆ, ಕೇರಬಾ ಪವಾರ್, ಗುಂಡಪ್ಪ ಮುಧಾಳೆ, ಪಂಢರಿ ಆಡೆ, ವಿಶ್ವನಾಥ ಬಿರಾದಾರ್, ಮಹಾದೇವ ಚಿಟಗೇರೆ, ಸಂಜುಕುಮಾರ ಮೇತ್ರೆ, ಬಲಭೀಮ ಕುಲಕರ್ಣಿ, ಶಿವಾಜಿ ಬೆಂಜರವಾಡ, ಮಲ್ಲಿಕಾರ್ಜುನ ಟಂಕಸಾಲೆ, ಗುರುನಾಥ ದೇಶಮುಖ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net