ಪ್ರತಿಭೆ ಅನಾವರಣಕ್ಕೆ ಕಾರಂಜಿ ವೇದಿಕೆ

Vadgon
Published on

ಔರಾದ್: ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣ ಮಾಡುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ದೇಶ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಕುಮಾರ ಹೇಡೆ ಹೇಳಿದರು.
ವಡಗಾಂವ(ದೇ) ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿದ ಅವರು, ಪ್ರತಿಭಾ ಕಾರಂಜಿ ಎಂಬುದು ಕಲಾ ಪ್ರತಿಭೆಗಳ ಚಿಣ್ಣರ ಹಬ್ಬ. ಮಕ್ಕಳ ಪ್ರತಿಭೆಯನ್ನು ಪಾಲಕರು ಹತ್ತಿರದಿಂದ ಕಣ್ತುಂಬಿಕೊಳ್ಳುವ ವೇದಿಕೆಯಾಗಿದೆ ಎಂದರು.
ಮಕ್ಕಳು ಜ್ಞಾನ ಸಂಪಾದನೆ ಜತೆಗೆ ಕ್ರೀಡೆ, ಸಾಂಸ್ಕೃತಿಕ ಬೆಳವಣಿಗೆಯೂ ಮೈಗೂಡಿಸಿಕೊಳ್ಳಬೇಕು. ಕೇವಲ ಅಂಕಪಟ್ಟಿ ಶಿಕ್ಷಣಕ್ಕೆ ಅಂಟಿಕೊಳ್ಳದೆ ಇತರ ಚಟುವಟಿಕೆಗಳಲ್ಲಿ ಸಹ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಬಿಆರ್ಪಿ ಶಶಿಕಾಂತ ಬಿಡವೆ ಮಾತನಾಡಿ, ಕ್ರೀಡೆಗಳು ಮಕ್ಕಳನ್ನು ಶಾರೀರಿಕವಾಗಿ ಸದೃಢವಾಗಿಸುವ ಜತೆಗೆ ಸೋಲು-ಗೆಲುವು ಸಮನಾಗಿ ಸ್ವೀಕರಿಸುವ ಗುಣ ಬೆಳೆಸುತ್ತವೆ ಎಂದು ತಿಳಿಸಿದರು.
ಸಿಆರ್.ಪಿ ರವೀಂದ್ರ ಡಿಗ್ಗಿ ಮಾತನಾಡಿ, ದೈಹಿಕ ಶಿಕ್ಷಣ ಅಕಾರಿಗಳು ಮತ್ತು ಪಾಲಕರು ಕ್ರೀಡೆ ಮಹತ್ವ ಅರಿತು ಮಕ್ಕಳಿಗೆ ನಿರಂತರ ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.
ಪಿಡಿಒ ಸುಭಾಷ ಬುಯ್ಯಾ, ಅಶೋಕ ಪಾಟೀಲ್, ಮುಖ್ಯಗುರು ಪ್ರೇಮಕುಮಾರ, ರಾಜಪ್ಪ ಖಡಕೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net