ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಲಾಭ ಪಡೆಯಿರಿ

Vishwakarma Varshikotsav-1 - Copy
Published on

ಬೀದರ್: ಕುಶಲಕರ್ಮಿಗಳು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಪಾಟೀಲ ಹೇಳಿದರು.
ನಗರದ ಲಕ್ಷ್ಮೀಬಾಯಿ ಕಮಠಾಣೆ ಪ್ರೌಢಶಾಲೆಯಲ್ಲಿ ಶುಕ್ರವಾರ ಶ್ರೀ ಟೆಕ್ನಾಲಜಿ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೌಶಲ ತರಬೇತಿ, ಸಾಲ ಸೇರಿದಂತೆ ಯೋಜನೆಯ ವಿವಿಧ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮಿಗಳಾಬೇಕು ಎಂದು ಸಲಹೆ ಮಾಡಿದರು.
ಯೋಜನೆಯಡಿ ಕೌಶಲ ತರಬೇತಿ ಪಡೆದ 200 ಮಂದಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಬಿಜೆಪಿ ಜಿಲ್ಲಾ ಘಟಕದ ಮಾಧ್ಯಮ ಪ್ರಮುಖ ಸಂಗಮೇಶ ನಾಸಿಗಾರ್, ಕಾರ್ಯದರ್ಶಿ ರಾಜಕುಮಾರ ನ್ಯಾಮತಾಬಾದ್, ಇತರ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಘಟಕದ ಕಾರ್ಯದರ್ಶಿ ನಿಲೇಶ್ ಜಾಧವ್, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಲೋಕೇಶ್, ಕಾರ್ಯಕ್ರಮದ ವಿಭಾಗೀಯ ಅಧಿಕಾರಿ ಭಾರ್ಗವ್, ಮಹೇಶ್ ಉಪಸ್ಥಿತರಿದ್ದರು.
ಶ್ರೀ ಟೆಕ್ನಾಲಜಿ ತರಬೇತಿ ಕೇಂದ್ರದ ಮುಖ್ಯಸ್ಥ ಸಂತೋಷ್ ರೆಡ್ಡಿ ಸ್ವಾಗತಿಸಿದರು. ಕೌಶಲ ತರಬೇತಿ ಪೂರ್ಣಗೊಳಿಸಿದ ಒಟ್ಟು 600 ಜನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಹಾರಾಷ್ಟ್ರದ ವಾರ್ಧಾದನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನಡೆದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ವಾರ್ಷಿಕೋತ್ಸವದ ನೇರ ಪ್ರಸಾರ ವೀಕ್ಷಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net