

ಬೀದರ್: ಅಖಿಲ ಭಾರತೀಯ ಸಾಹಿತ್ಯ ಪರಿಷದ್‍ನ ಜಿಲ್ಲಾ ಸಮಿತಿ ಹಾಗೂ ನಾಟ್ಯಶ್ರೀ ನೃತ್ಯಾಲಯ ವತಿಯಿಂದ ಭಗತ್‍ಸಿಂಗ್ ಅವರ ಜನ್ಮದಿನಾಚರಣೆ ನಿಮಿತ್ತ ನಗರದ ಮನ್ನಳ್ಳಿ ರಸ್ತೆಯಲ್ಲಿ ಇರುವ ರಿಯಲನ್ಸ್ ಟೆಂಡ್ಸ್ ಹಿಂದುಗಡೆಯ ನಾಟ್ಯಶ್ರೀ ಸಾಂಸ್ಕøತಿಕ ಭವನದಲ್ಲಿ ಸೆ. 26 ರಂದು ಭರತನಾಟ್ಯ ಹಾಗೂ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.
ಸಂಜೆ 6ಕ್ಕೆ ನಡೆಯುವ ಕಾರ್ಯಕ್ರಮವನ್ನು ವಿದ್ಯಾರಣ್ಯ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಪ್ರತಿಭಾ ಚಾಮಾ ಉದ್ಘಾಟಿಸುವರು. ಬೆಂಗಳೂರಿನ ಯುವ ವಾಗ್ಮಿ ಕು. ಹಾರಿಕಾ ಮಂಜುನಾಥ ಅವರು ‘ರಾಷ್ಟ್ರ ನಿರ್ಮಾಣದಲ್ಲಿ ಸಾಹಿತ್ಯದ ಕೊಡುಗೆ’ ಕುರಿತು ವಿಶೇಷ ಉಪನ್ಯಾಸ ನೀಡುವರು.
ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಬಿಜೆಪಿ ಮುಖಂಡ ಈಶ್ವರಸಿಂಗ್ ಠಾಕೂರ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಜಿಲ್ಲಾ ಸಮಿತಿಯ ಅಧ್ಯಕ್ಷೆ ರಾಣಿ ಸತ್ಯಮೂರ್ತಿ ಅಧ್ಯಕ್ಷತೆ ವಹಿಸುವರು.
ಸವಿಗಾನ ಸಂಗೀತ ಅಕಾಡೆಮಿಯ ಭಾನುಪ್ರಿಯಾ ಅರಳಿ ನಾಡಗೀತೆ ಹಾಡುವರು. ನಾಟ್ಯಶ್ರೀ ನೃತ್ಯಾಲಯದ ಕಲಾವಿದರು ಭರತನಾಟ್ಯ ಪ್ರದರ್ಶಿಸುವರು. ಬಸವರಾಜ ಮೂಲಗೆ ಹಾಗೂ ದೇವಿದಾಸ ಜೋಶಿ ನಿರೂಪಿಸುವರು.
ಸಾಹಿತ್ಯ, ಕಲಾ ಆಸಕ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ರಾಣಿ ಸತ್ಯಮೂರ್ತಿ ಕೋರಿದ್ದಾರೆ.