ಅಂಗವಿಕಲರಿಗೆ ತೊಂದರೆ ಕೊಟ್ಟರೆ ಸುಮ್ಮನಿರಲ್ಲ

aurad 1
filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Night; cct_value: 0; AI_Scene: (-1, -1); aec_lux: 0.0; hist255: 0.0; hist252~255: 0.0; hist0~15: 0.0;
Published on

ಔರಾದ್: ಅಂಗವಿಕಲರ ಅನುಕೂಲಕ್ಕಾಗಿ ಸರ್ಕಾರ ಜಾರಿಗೊಳಿಸಿದ ಎಲ್ಲ ಯೋಜನೆಗಳನ್ನು ಸಮರ್ಪಕ ಜಾರಿಗೊಳಿಸಬೇಕು. ಯಾವುದಾದರೂ ಕಚೇರಿಗಳಲ್ಲಿ ಅಂಗವಿಕಲರಿಗೆ ಹಣಕ್ಕಾಗಿ ಬೇಡಿಕೆ, ವಿನಃಕಾರಣ ಸತಾಯಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಶಾಸಕ ಪ್ರಭು ಚವ್ಹಾಣ್ ಅಧಿಕಾರಿಗಳಿಗೆ ಎಚ್ಚರಿಸಿದರು.
ಶಾಸಕರ ಕಚೇರಿಯಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ದಿವ್ಯಾಂಗರ ಎಡಿಐಪಿ ಯೋಜನೆಯಡಿ ಅಂಗವಿಕಲ ಫಲಾನುಭವಿಗಳಿಗೆ ಸಾಧನ ಸಲಕರಣೆ ವಿತರಿಸುವ ಸಾಮಾಜಿಕ ಆಧಾರಿತ ಶಿಬಿರದಲ್ಲಿ ಮಾತನಾಡಿ, ಅಂಗವಿಕಲರಿಗೆ ಅನುಕೂಲವಾಗುವಂತೆ ನರೇಂದ್ರ ಮೋದಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಕ್ಷೇತ್ರದ ಅಂಗವಿಕಲರ ಅನುಕೂಲಕ್ಕಾಗಿ ಒಂದು ಕೋಟಿ ರೂ. ಮೌಲ್ಯದ ಸಾಧನ ಸಲಕರಣೆ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಅಂಗವಿಕಲರು ಎಲ್ಲರಂತೆ ಸ್ವಾಭಿಮಾನ ಮತ್ತು ಗೌರವದಿಂದ ಬದುಕಬೇಕೆಂಬ ಉದ್ದೇಶದಿಂದ ದಿವ್ಯಾಂಗರೆಂದು ಕರೆಯಲಾಗುತ್ತಿದೆ. ಅವರ ವ್ಯಾಸಂಗಕ್ಕೆ ಅನುಕೂಲವಾಗಲು ವಿದ್ಯಾರ್ಥಿ ವೇತನ, ಪಿಂಚಣಿ, ಉನ್ನತ ವಿದ್ಯಾಭ್ಯಾಸಕ್ಕೆ ನೆರವು, ಪ್ರತಿಭಾವಂತರಿಗೆ ಪ್ರೋತ್ಸಾಹಧನ, ಟಾಕಿಂಗ್ ಲ್ಯಾಪ್ಟಾಪ್, ಸಾಧನ ಸಲಕರಣೆ ವಿತರಣೆ, ರಿಯಾಯಿತಿ ದರದಲ್ಲಿ ಬಸ್ ಪಾಸ್, ಉಚಿತ ರೈಲ್ವೆ ಪಾಸ್, ಬ್ರೈಲ್ ಕಿಟ್ ವಿತರಣೆ, ಶಿಶುಪಾಲನಾ ಭತ್ಯೆ ಹೀಗೆ ಹತ್ತು ಹಲವು ಯೋಜನೆಗಳು ಜಾರಿಯಲ್ಲಿವೆ ಎಂದು ತಿಳಿಸಿದರು.
ನನಗೆ ಅಂಗವಿಕಲರ ಬಗ್ಗೆ ಸಾಕಷ್ಟು ಗೌರವವಿದೆ. ಯಾವ ಸಮಸ್ಯೆ ಇದ್ದರೂ ನೇರವಾಗಿ ನನ್ನನ್ನು ಭೇಟಿಯಾಗಬೇಕು. ಅಂಗವಿಕಲರ ಅನುಕೂಲಕ್ಕಾಗಿ ತಾಲೂಕು ಕೇಂದ್ರದಲ್ಲಿ ಕಚೇರಿ ಒದಗಿಸಲಾಗಿದೆ. ಕೆಲಸ ಇನ್ನಷ್ಟು ಅಚ್ಚುಕಟ್ಟಾಗಿ ನಡೆಯಲು ಟೇಬಲ್, ಕಂಪ್ಯೂಟರ್ ಇತರ ಅಗತ್ಯ ಸಲಕರಣೆ ಒದಗಿಸಬೇಕು ಎಂಬ ಮನವಿಗೆ ಸ್ಪಂದಿಸಲಾಗಿದೆ ಎಂದರು.
ಎಪಿಎಂಸಿ ಅಧ್ಯಕ್ಷ ಧೊಂಡಿಬಾ ನರೋಟೆ, ತಾಪಂ ಇಒ ಬೀರೇಂದ್ರಸಿಂಗ್ ಠಾಕೂರ್, ಶಿವಕುಮಾರ ಘಾಟೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ವಾಮಿದಾಸ, ರಾಮಶೆಟ್ಟಿ ಪನ್ನಾಳೆ, ಬಸವರಾಜ ದೇಶಮುಖ ಇತರರಿದ್ದರು. ಚನ್ನಬಸಪ್ಪ ಪಾಟೀಲ್ ನಿರೂಪಣೆ ಮಾಡಿ ವಂದಿಸಿದರು. 141 ಫಲಾನುಭವಿಗಳಿಗೆ ವಿವಿಧ ಸಾಧನ ಸಲಕರಣೆ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net