ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ

ss khuba collage
Published on

ಬಸವಕಲ್ಯಾಣ: ನಿರಂತರ ಅಭ್ಯಾಸ, ಕಠಿಣ ಪರಿಶ್ರಮದಿಂದ ಅಸಾಧ್ಯವಾದದ್ದನ್ನು ಸಾಧಿಸಬಹುದು ಎಂದು ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಎಸ್. ನಾಗರಾಳೆ ಹೇಳಿದರು.
ನಗರದ ಎಸ್ಎಸ್ಕೆ ಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಿ.ಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಮಯ ಪ್ರಜ್ಞೆ ಅಳವಡಿಸಿಕೊಳ್ಳಬೇಕು. ಸತತ ಪ್ರಯತ್ನಗಳಿಂದ ಯಶಸ್ಸು ಸಾಸಬಹುದು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಬಸವರಾಜ ಎವಲೆ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಹೊಂದಿರಬೇಕು. ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕಾಲೇಜು ನಾನಾ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.
ತಾಲೂಕುಮಟ್ಟದ ಕ್ರೀಡಾಕೂಟದ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದ ಮಹಾವಿದ್ಯಾಲಯದ ನೇತ್ರಾ ವಿಜಯಕುಮಾರ, 185 ಕೆಜಿ ಭಾರ ಎತ್ತುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸುಮೀತ್ ವೀರಣ್ಣ ಅವರನ್ನು ಸನ್ಮಾನಿಸಲಾಯಿತು.
ನಿವೃತ್ತ ಪ್ರಾಧ್ಯಾಪಕ ಪ್ರೊ.ಆರ್.ಡಿ. ಬಾಲಕಿಲೆ, ಪ್ರೊ.ಶಾಂತಕುಮಾರ ಬಾಬಾನಗೋಳ, ಡಾ.ರಮೇಶ ಕೆ.ಬಿ., ಮಾಹಾದೇವ ದೇಗಾಂವ, ಡಾ.ಸುರೇಶ ಎಚ್.ಆರ್., ಸೂರ್ಯಕಾಂತ ನಾಸೆ, ಇಂದ್ರಜಿತ್ ರೆಡ್ಡಿ, ದೀಪಕ್ ಕಾಡದಿ, ಸತೀಶ್ ರಾಠೋಡ್, ಜ್ಯೋತಿ ಪಾಟೀಲ್, ವೈಶಾಲಿ ಎಚ್. ಇತರರಿದ್ದರು. ಡಾ.ಶಿವಕುಮಾರ ಪಾಟೀಲ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ನೇತ್ರಾ ನಿರೂಪಣೆ ಮಾಡಿದರು. ಭೀಮಾಶಂಕರ ಪೂಜಾರಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net