ಖಂಡ್ರೆ ಅಭಿನಂದನಾ ಸಮಾರಂಭ 28ರಂದು

Sagar Khandre
Published on

ಬೀದರ್: ಗಾಂಧಿಗಂಜ್‍ನ ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ವತಿಯಿಂದ ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಸೆ. 28 ರಂದು ಸಂಜೆ 4ಕ್ಕೆ ಸಂಸದ ಸಾಗರ್ ಈಶ್ವರ ಖಂಡ್ರೆ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ರೈತರು, ಗಾಂಧಿಗಂಜ್‍ನ ವ್ಯಾಪಾರಿಗಳು, ಮುನೀಮರು, ಹಮಾಲರು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಧನ್ನೂರ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net