

ಬೀದರ್: ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಸಂಪೂರ್ಣ ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಈ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ನಗರದಲ್ಲಿ ಧರಣಿ ನಡೆಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತ ಸಮಿತಿ ಪ್ರಮುಖರು, ಒಂದು ದೇಶ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಡಳಿತಾರೂಢ ಬಿಜೆಪಿಯ ಗುಪ್ತ ಅಜೆಂಡಾ ಒಳಗೊಂಡಿರುವ ಈ ಪ್ರಸ್ತಾಪ ಚುನಾವಣೆ ವ್ಯವಸ್ಥೆ ವಿರುದ್ಧವಾಗಿದೆ. ಇಡೀ ದೇಶದಲ್ಲಿ ಏಕಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸುವ ಶಕ್ತಿ, ಸಾಮಥ್ರ್ಯ ಚುನಾವಣೆ ಆಯೋಗಕ್ಕಿಲ್ಲ. ಇನ್ನು ಅವಸರದಿಂದ ಮಾಡುವ ಕೆಲಸ ಇದಲ್ಲ. ಹೊಸ ಚುನಾವಣೆ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗುತ್ತದೆ. ಇದೆಲ್ಲವೂ ನರೇಂದ್ರ ಮೋದಿ ಸರ್ಕಾರಕ್ಕೆ ಗೊತ್ತಿದ್ದರೂ ಜನರಲ್ಲಿ ಗೊಂದಲ ಮೂಡಿಸಿ ತಮ್ಮ ವೈಫಲ್ಯ ಮುಚ್ಚಿ ಹಾಕಲು ಈ ಕೆಲಸಕ್ಕೆ ಮುಂದಾಗಿದೆ ಕಿಡಿಕಾರಿದರು.
ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಜಿಲ್ಲಾ ಸಂಘಟನಾ ಸಂಚಾಲಕ ಅಶೋಕ ಗಾಯಕವಾಡ, ಸಂಚಾಲಕ ಅರುಣ ಪಟೇಲ್, ಪ್ರಮುಖರಾದ ರಾಜಕುಮಾರ ವಾಘಮಾರೆ, ರಮೇಶ ಬೆಲ್ದಾರ, ಶಿವರಾಜ ತಡಪಳ್ಳಿ, ಸತೀಶ ರತ್ನಾಕರ್, ಶಿರೋಮಣಿ ಹಲಗೆ, ಬಸವರಾಜ ಭಾವಿದೊಡ್ಡಿ, ರಾಹುಲ್ ಹಾಲಹಿಪ್ಪಗರ್ಾ, ಶಿವಕುಮಾರ ಗುನ್ನಳ್ಳಿ, ಗೌತಮ ಮುತ್ತಂಗಿಕರ್, ಜೈಭೀಮ ಚಿಮ್ಮನಾಯಕ, ವಾಮನ್ ಮೈಸಲಗೆ ಇತರರಿದ್ದರು. ರಾಷ್ಟ್ರಪತಿಗೆ ಬರೆದ ಮನವಿಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.