ಅನುಭವ ಮಂಟಪ ನಿಗದಿತ ಅವಯಲ್ಲಿ ಪೂರ್ಣಗೊಳಿಸಿ

27blk1
Published on

ಭಾಲ್ಕಿ: ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ ಕಾರ್ಯ ನಿಯೋಜಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ ಎಂದು ಹಿರೇಮಠ ಸಂಸ್ಥಾನ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಹೇಳಿದರು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತ ಜಗನ್ನಾಥ ರೆಡ್ಡಿ ಅವರನ್ನು ಸನ್ಮಾನಿಸಿ ಮಾತನಾಡಿ, ಮಹತ್ವದ ಕಾರ್ಯವನ್ನು ಪ್ರಾಧಿಕಾರದ ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ತಿಳಿಸಿದರು.
ಬಸವಕಲ್ಯಾಣ ಅತ್ಯಂತ ಪವಿತ್ರವಾದ ನೆಲ. ಈ ಭೂಮಿಯಲ್ಲಿ ಸೇವೆ ಮಾಡುವ ಅವಕಾಶ ದೊರೆತಿರುವುದು ವಿಶ್ವಗುರು ಬಸವಣ್ಣನವರ ಕೃಪಾಶೀರ್ವಾದವೆಂದು ಭಾವಿಸಿ. ಪ್ರಸ್ತುತ ಬಸವಣ್ಣನವರ ತತ್ವಾದರ್ಶದ ಕಡೆಗೆ ಜಗತ್ತು ನೋಡುತ್ತಿದೆ ಎಂದು ತಿಳಿಸಿದರು.
ಸನ್ಮಾನ ಸ್ವೀಕರಿಸಿದ ನೂತನ ಆಯುಕ್ತ ಜಗನ್ನಾಥರಡ್ಡಿ ಮಾತನಾಡಿ, ಶರಣರ ಭೂಮಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ನನ್ನ ಪುಣ್ಯವೆಂದು ಭಾವಿಸಿದ್ದೇನೆ. ನನ್ನ ಅವಧಿಯಲ್ಲಿ ಬಸವಕಲ್ಯಾಣ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಪ್ರಾಧಿಕಾರ ಅಭಿಯಂತರ ಶಿವಕುಮಾರ ತಳವಾಡೆ, ಸಿದ್ಧೇಶ ಭಾಲ್ಕೆ, ಆಡಳಿತಾಧಿಕಾರಿ ಮೋಹನರಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net