

ಬೀದರ್: ಬಸವ ಸೇವಾ ಪ್ರತಿಷ್ಠಾನದ ನೀಲಮ್ಮನ ಬಳಗದ ವತಿಯಿಂದ ನಗರದ ಶರಣ ಉದ್ಯಾನದಲ್ಲಿ ಅ.3ರಿಂದ ಅ.12 ರವರೆಗೆ ಪೂಜ್ಯ ಡಾ.ಗಂಗಾಂಬಿಕೆ ಅಕ್ಕ ಅವರ ದಿವ್ಯ ಸಾನಿಧ್ಯದಲ್ಲಿ ಕಲ್ಯಾಣ ಕ್ರಾಂತಿ ವಿಜಯೋತ್ಸವ ಮರಣವೇ ಮಹಾನವಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಿತ್ಯ ಸಂಜೆ 6ಕ್ಕೆ ಅನುಭಾವ, ಧ್ವಜಾರೋಹಣ, ವಚನ ಗಾಯನ, ನಾಟಕ, ವಚನ ಪಠಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬಳಗದ ಪ್ರಮುಖರು ಕೋರಿದ್ದಾರೆ.