

ಬೀದರ್: ಹರಿಯಾಣ, ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆ ಫಲಿತಾಂಶವು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಗೆಲುವಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ವ್ಯಾಖ್ಯಾನಿಸಿದ್ದಾರೆ.
ಹರಿಯಾಣದಲ್ಲಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ, ಇದು ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಸಂಕಲ್ಪಕ್ಕೆ ಸಂದ ಜಯವಾಗಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಷಡ್ಯಂತ್ರ ಮಾಡಿ, ಕೆಲ ವರ್ಷಗಳಿಂದ ನಕಲಿ ರೈತ ನಾಯಕರ ಗುಂಪನ್ನು ರಚಿಸಿ, ಅಮಾಯಕ ರೈತರನ್ನು ದಾರಿ ತಪ್ಪಿಸಿ ಕೇಂದ್ರ ಸಕರ್ಾರದ ವಿರುದ್ದ ಎತ್ತಿಕಟ್ಟುವ ಕೆಲಸ ಮಾಡಿತ್ತು. ಪ್ರತಿಭಟನೆ ಮೂಲಕ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಯತ್ನಮಾಡಿಸಿತ್ತು. ಆದರೆ ಅಲ್ಲಿನ ಪ್ರಜ್ಞಾವಂತ ಮತದಾರರು ಮೋದಿ ನಾಯಕತ್ವಕ್ಕೆ ಬಲ ತುಂಬಿದ್ದಾರೆ. ಇದರಿಂದ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳಿಗೆ ಮುಖಭಂಗವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.