ವಿಮಾನಯಾನ ಸೇವೆ ಸಚಿವ ಖಂಡ್ರೆ ಸಭೆ

Ishwar Khandre
Published on

ಬೀದರ್: ಸ್ಧಗಿತಗೊಂಡಿರುವ ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ಮತ್ತೆ ಆರಂಭಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಭೆ ನಡೆಸಿ ಚರ್ಚಿಸಿದರು.
ವಿಕಾಸಸೌಧದ ಕೊಠಡಿ ಸಂಖ್ಯೆ 36ರಲ್ಲಿ ಆಯೋಜಿಸಿದ್ದ ಸಭೆಯಲ್ಲಿ ವಿಮಾನಯಾನ ಸೇವೆ ಒದಗಿಸುವ ಖಾಸಗಿ ಸಂಸ್ಥೆಯ ಅಧಿಕಾರಿಗಳು ಹಾಗೂ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು.
ಉಡಾನ್ ಯೋಜನೆ ಅಡಿ ನೀಡಲಾಗುತ್ತಿದ್ದ ಅನುದಾನ ನಿಲ್ಲಿಸಿರುವ ಕಾರಣ ಖಾಸಗಿ ವಿಮಾನಯಾನ ಸೇವೆ ಒದಗಿಸುವ ಸಂಸ್ಥೆಗಳು ಬೀದರ್ ನಾಗರಿಕ ವಿಮಾನಯಾನ ಸೇವೆ ಸ್ಥಗಿತಗೊಳಿಸಿದ್ದು, ಸೇವೆಯನ್ನು ಮತ್ತೆ ಆರಂಭದ ಬಗ್ಗೆ ಚರ್ಚಿಸಲಾಯಿತು. ಬರುವ ಸಚಿವ ಸಂಪುಟದ ಸಭೆಯ ಮುಂದೆ ಈ ಪ್ರಸ್ತಾವನೆ ಮಂಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net