ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

hanmu paaji
Published on

ಬೀದರ್: ಇಲ್ಲಿಯ ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕøತಿಕ ಸಂಸ್ಥೆ ಮತ್ತು ಹಣ್ಣು ಪಾಜಿ ಗೆಳೆಯರ ಬಳಗದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯ, ಕಾನೂನು, ಕಲೆ, ಸಂಸ್ಕøತಿ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರು ಅಕ್ಟೋಬರ್ 21 ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಅಧ್ಯಕ್ಷ ಹಣ್ಮು ಪಾಜಿ ತಿಳಿಸಿದ್ದಾರೆ.
ಸಾಧಕರು ತಮ್ಮ ಸಾಧನೆಯ ಎರಡು ಪುಟಗಳ ಮಾಹಿತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಅಧ್ಯಕ್ಷರು, ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕøತಿಕ ಸಂಸ್ಥೆ, ಅಲ್ಲಮಪ್ರಭುನಗರ, ಬೀದರ್ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಇಲ್ಲವೇ ಇ ಮೇಲ್ ವಿಳಾಸ hanmupaaji55@gmail.comಗೆ ಸಲ್ಲಿಸಬಹುದು ಎಂದು ಹೇಳಿದ್ದಾರೆ.
ಈ ಬಾರಿ 55 ಸಾಧಕರಿಗೆ ಪ್ರಶಸ್ತಿ ಕೊಡಲು ನಿರ್ಧರಿಸಲಾಗಿದೆ. ಸಾಧಕರು ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 8747930063 (ರವಿ) ಅಥವಾ 9482114397 (ಸಂಗಮೇಶ್)ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net