

ಬೀದರ್: ಪಿಡಿಒ ಹುದ್ದೆಯನ್ನು ಗ್ರೂಪ್ ಬಿ ದರ್ಜೆಗೆ ಉನ್ನತೀಕರಿಸಬೇಕು ಎನ್ನುವ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದಕ್ಕೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಗ್ರೂಪ್ ಬಿ ಉನ್ನತೀಕರಣ ಸಂಘದ ಕಲಬುರಗಿ ವಿಭಾಗೀಯ ಕಾರ್ಯದರ್ಶಿ ಉಮೇಶ ಕೆ. ಜಾಬಾ ಸಂತಸ ವ್ಯಕ್ತಪಡಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವರು ಹುದ್ದೆ ಉನ್ನತೀಕರಣಕ್ಕೆ ಸಮಿತಿ ರಚಿಸಿ ಮೂರು ತಿಂಗಳೊಳಗೆ ವರದಿ ಪಡೆದು, ಘೋಷಣೆ ಮಾಡುವ ಭರವಸೆ ನೀಡಿದ್ದಾರೆ. ಹೀಗಾಗಿ ಹೋರಾಟವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.