ಜಾತಿ ಗಣತಿ ವರದಿ ಮಂಡಿಸಿ

Oplus_131072
Oplus_131072
Published on

ಬೀದರ್: ಅ.18ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಮಂಡಿಸಬೇಕು ಎಂದು ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟ ಒತ್ತಾಯಿಸಿದೆ.
ಒಕ್ಕೂಟದ ಪ್ರಮುಖರು ಮುಖ್ಯಮಂತ್ರಿ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿ, ರಾಜ್ಯದ ಎಲ್ಲ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಿದ್ಧಪಡಿಸಿದ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ಸರ್ಕಾರ ಇನ್ನು ವಿಳಂಬ ಮಾಡಬಾರದು ಎಂದು ಆಗ್ರಹಿಸಿದ್ದಾರೆ.
ಸಮೀಕ್ಷಾ ವರದಿಯನ್ನು ಸಂಪುಟದಲ್ಲಿ ಮಂಡಿಸಲು ಕೆಲವರು ಆಕ್ಷೇಪ ಮಾಡುತ್ತಿದ್ದಾರೆ. ಸರ್ಕಾರ ಇಂಥ ಯಾವುದೇ ಆಕ್ಷೇಪ, ಬೆದರಿಕೆಗೆ ಜಗ್ಗಬಾರದು. ಬಡವರು, ರೈತರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದವರಿಗೆ ಅನುಕೂಲವಾಗುವ ಈ ಜಾತಿ ಗಣತಿ ವರದಿ ಬಿಡುಗಡೆ ಮಾಡಲು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲೂ ಘೋಷಣೆ ಮಾಡಿದೆ. ಅದರಂತೆ ಇದೀಗ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಮುಖರಾದ ಅಮೃತರಾವ ಚಿಮಕೋಡೆ, ಬಸವರಾಜ ಮಾಳಗೆ, ರಮೇಶ ಡಾಕುಳಗಿ, ಬಾಬುರಾವ ಕುಂಬಾರ, ಮಹೇಶ ಪಾಂಚಾಳ, ರಘುನಾಥ ಮರಕಲ್, ಬಾಬುರಾವ ಪಾಸ್ವಾನ್, ಅಂಬಾದಾಸ ಗಾಯಕವಾಡ್, ರಾಜಕುಮಾರ ಬನ್ನೇರ್, ಶಿಲ್ಪಾತ್ರಾವ ದೀನೆ, ಗೌತಮ ಬೋಸ್ಲೆ, ಎಂ.ಡಿ. ಮಜಾರ್, ಲಕ್ಷ್ಮಣ ಸೋರಳ್ಳಿ, ಶಿವಕುಮಾರ ನೀಲಿಕಟ್ಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net