

ಬೀದರ್: ಜಿಲ್ಲಾದ್ಯಂತ ಜಾನುವಾರುಗಳಿಗೆ 6ನೇ ಸುತ್ತಿನ ಕಾಲು ಮತ್ತು ಬಾಯಿ ಜ್ವರ ಸಾಮೂಹಿಕ ಲಸಿಕಾ ಕಾರ್ಯಕ್ರಮ ಅ.21ರಿಂದ ನ.20ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಕಾಲು ಮತ್ತು ಬಾಯಿಜ್ವರ ಲಸಿಕಾ ಕಾರ್ಯಕ್ರಮ ಅನುಷ್ಠಾನ ಸಭೆಯಲ್ಲಿ ಮಾತನಾಡಿ, ಪ್ರತಿಯೊಂದು ಗ್ರಾಮದಲ್ಲಿ ಪಶು ವೈದ್ಯರು ಹಾಗೂ ಸಿಬ್ಬಂದಿ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳಲು ಪ್ರೋತ್ಸಾಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಪಶುವೈದ್ಯರು ಹಾಗೂ ಸಿಬ್ಬಂದಿ ಮನೆ ಬಾಗಿಲಿಗೆ ಬಂದಾಗ ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದರು.
ಜಿಪಂ ಸಿಇಒ ಡಾ.ಗಿರೀಶ್ ಬದೋಲೆ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ.ನರಸಪ್ಪ ದೇವಗೊಂಡ ಇತರರಿದ್ದರು.