ಭೂ ವ್ಯಾಜ್ಯ ಅರ್ಜಿ ವಿಲೇವಾರಿ ಶೀಘ್ರ

dc shilpa sharma
Published on

ಬೀದರ್: ಭೂ ವ್ಯಾಜ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಶೀಘ್ರದಲೇ ವಿಲೇವಾರಿ ಮಾಡಲಾಗುವುದು ಎಂದು ಜಿಲ್ಲಾಕಾರಿ ಶಿಲ್ಪಾ ಶರ್ಮಾ ಹೇಳಿದರು.
ಗ್ರಾಮೀಣ ಭಾಗದಲ್ಲಿ ರೈತರು ತಮ್ಮ ಜಮೀನುಗಳಿಗೆ ಹೋಗಿಬರಲು ಯಾವುದೇ ಸಮಸ್ಯೆ ಇಲ್ಲ. ಆದರೆ ಹೊಲಗಳಲ್ಲಿನ ಬೆಳೆಗಳ ರಾಶಿ ಸಮಯದಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ರೈತರು ಅಹವಾಲು ಅರ್ಜಿ ಸಲ್ಲಿಸಿದ್ದು, ಕ್ರಮಕೈಗೊಳ್ಳಲು ಸಂಬಂಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸರ್ಕಾರಿ ಶಾಲೆಗಳ ಜಾಗದಲ್ಲಿ ಅಕ್ರಮವಾಗಿ ಸೆಡ್ ನಿರ್ಮಾಣ ಮಾಡಿರುವ ಬಗ್ಗೆ ಮಾಹಿತಿ ಇದ್ದು, ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ. ಕೆಲವರು ನಿರಂತರವಾಗಿ ಅಕ್ರಮ ಭೂ ಮಾಫಿದಲ್ಲಿ ತೊಡಗಿದ್ದಾರೆ. ಅಂಥವರ ವಿರುದ್ಧ ಎಫ್ಐಆರ್ ಹಾಕಿ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net