ಬಸವ ದಳದ ಬೀದರ್ ನಗರ ಅಧ್ಯಕ್ಷರಾಗಿ ಧನ್ನೂರ

Vivekanand Dhannur Appointment
Published on

ಬೀದರ್: ರಾಷ್ಟ್ರೀಯ ಬಸವ ದಳದ ಬೀದರ್ ನಗರ ಘಟಕದ ನೂತನ ಅಧ್ಯಕ್ಷರಾಗಿ ಉದ್ಯಮಿ ವಿವೇಕಾನಂದ ಕಾಶಪ್ಪ ಧನ್ನೂರ ಅವರನ್ನು ನೇಮಕ ಮಾಡಲಾಗಿದೆ.
ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಜಗದ್ಗುರು ಮಾತೆ ಡಾ. ಗಂಗಾದೇವಿ ಅವರು ಬಸವಕಲ್ಯಾಣದಲ್ಲಿ ಶನಿವಾರ ನಡೆದ ಕಲ್ಯಾಣ ಪರ್ವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಈ ನೇಮಕ ಮಾಡಿದರು.
ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ ಅವರು ವಿವೇಕಾನಂದ ಅವರಿಗೆ ಷಟ್‍ಸ್ಥಲ ಧ್ವಜ ಕೊಟ್ಟು ಸ್ವಾಗತಿಸಿದರು.
ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಶಿವಾನಂದ ಸ್ವಾಮೀಜಿ, ಗುರುಬಸವ ಪಟ್ಟದ್ದೇವರು, ಶಾಸಕ ಡಾ. ಶರಣು ಸಲಗರ, ಜಿಲ್ಲಾ ಲಿಂಗಾಯತ ಸಮಾಜದ ಅಧ್ಯಕ್ಷ ಕುಶಾಲರಾವ್ ಪಾಟೀಲ ಖಾಜಾಪುರ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ ಸ್ವಾಮಿ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಸಂಜುಕುಮಾರ ಪಾಟೀಲ, ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷ ರವೀಂದ್ರ ಕೊಳಕೋರ, ಯುವ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಬಿರಾದಾರ, ಪ್ರಮುಖರಾದ ಜೈರಾಜ್ ಖಂಡ್ರೆ, ಚಂದ್ರಶೇಖರ ಹೆಬ್ಬಾಳೆ, ಶಿವರಾಜ ನರಶೆಟ್ಟಿ, ಶರಣಪ್ಪ ಮಿಠಾರೆ, ರವಿ ಪಾಪಡೆ, ಕಂಟೆಪ್ಪ ಗಂದಿಗುಡಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net