ಹೆದ್ದಾರಿ ತಡೆ ಪ್ರತಿಭಟನೆ ಮುಂದೂಡಿಕೆ

Somnath Patil
Published on

ಬೀದರ್: ಹುಮನಾಬಾದ್ ತಾಲುಕಿನ ಹುಡಗಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಕೆಳಗಡೆ ಒಂದು ಭಾಗಕ್ಕೆ ಸರ್ವಿಸ್ ರಸ್ತೆ ನಿರ್ಮಿಸದ ಕಾರಣಕ್ಕೆ ಜಿಲ್ಲಾ ಬಿಜೆಪಿಯಿಂದ ಅ.21ರಂದು ಹಮ್ಮಿಕೊಂಡಿದ್ದ ಹೆದ್ದಾರಿ ಬಂದ್ ಪ್ರತಿಭಟನೆ ಮುಂದೂಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ತಿಳಿಸಿದ್ದಾರೆ.
ಎಸ್ಪಿ ಕಚೇರಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಜಿಲ್ಲಾಧಿಕಾರಿ, ಹೆದ್ದಾರಿ ಪ್ರಾಧಿಕಾರದ ಯೋಜನಾಧಿಕಾರಿ ಹಾಗೂ ಇತರ ಅಧಿಕಾರಿಗಳು ನೀಡಿದ ಭರವಸೆ ಹಿನ್ನೆಲೆಯಲ್ಲಿ ಹೋರಾಟ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net