ಕನ್ನಡ ಬಳಸದ ನಾಮಫಲಕಗಳಿಗೆ ಮಸಿ; ಕರವೇ ಎಚ್ಚರಿಕೆ

Somnath Mudhool
Published on

ಬೀದರ್: ನಗರದಲ್ಲಿ ನವೆಂಬರ್ 1 ರ ಒಳಗೆ ಮೇಲುಗಡೆ ಶೇ 60 ರಷ್ಟು ಭಾಗದಲ್ಲಿ ಕನ್ನಡ ಬಳಸದ ನಾಮಫಲಕಗಳಿಗೆ ಮಸಿ ಬಳಿಯುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

ಕನ್ನಡ ನಾಮಫಲಕ ಅಳವಡಿಕೆಗೆ ಈಗಾಗಲೇ ಅನೇಕ ಬಾರಿ ಹೋರಾಟ ನಡೆಸಿ, ಕಾಲಾವಕಾಶವನ್ನೂ ನೀಡಲಾಗಿದೆ. ಇನ್ನು ಮಸಿ ಬಳಿದು ಪ್ರತಿಭಟಿಸಲಾಗುವುದು ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ತಿಳಿಸಿದ್ದಾರೆ.

ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ, ಜಾಹೀರಾತು ಫಲಕ ಸೇರಿ ಎಲ್ಲ ರೀತಿಯ ನಾಮಫಲಕಗಳ ಮೇಲೆ ಶೇ 60 ರಷ್ಟು ಭಾಗದಲ್ಲಿ ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಈಗಾಗಲೇ ಸುಗ್ರೀವಾಜ್ಞೆ ಹೊರಡಿಸಿದೆ. ಆದರೂ, ನಗರದಲ್ಲಿ ಈ ಆದೇಶ ಪೂರ್ಣಪ್ರಮಾಣದಲ್ಲಿ ಅನುಷ್ಠಾನಕ್ಕೆ ಬಂದಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದೀಗ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಜಾಗೃತಿ ಜಾಥಾ ನಡೆಸಿ, ಕನ್ನಡ ನಾಮಫಲಕಗಳ ಅಳವಡಿಕೆಗೆ ಕ್ರಮ ಕೈಗೊಳ್ಳುತ್ತಿರುವುದು ಸ್ವಾಗತಾರ್ಹ. ನಾಮಫಲಕ ಜಾಗೃತಿ ಕಾರ್ಯಕ್ಕೆ ವೇದಿಕೆ ಆಡಳಿತದೊಂದಿಗೆ ಕೈಜೋಡಿಸಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net