

ಔರಾದ್: ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ಹಣ್ಮುಪಾಜಿ ಗೆಳೆಯರ ಬಳಗ ವತಿಯಿಂದ ಕೊಡಮಾಡುವ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ತಾಲೂಕಿನ ವಡಗಾಂವ್ (ದೇ) ನಿವಾಸಿಯಾದ ಕೆಎಎಸ್ ಅಧಿಕಾರಿ ಖಾಜಾ ಖಲಿಲುಲ್ಲಾ ಅವರನ್ನು ಆಯ್ಕೆ ಮಾಡಲಾಗಿದೆ.
ಖಲಿಲುಲ್ಲಾ ಅವರ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನ.5ರಂದು ಬೀದರ್ ನ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಾರ್ಯಕ್ರಮ ಆಯೋಜಕ ಹಣ್ಮು ಪಾಜಿ ತಿಳಿಸಿದ್ದಾರೆ.
ಕಡು ಬಡತನ ಕುಟುಂಬದಲ್ಲಿ ಜನಿಸಿದ ಖಲಿಲುಲ್ಲಾ ಅವರು ಕಠಿಣ ಪರಿಶ್ರಮ ಪಟ್ಟು ವ್ಯಾಸಂಗ ಮಾಡಿ, 2017ರಲ್ಲಿ ಕೆಎಎಸ್ ಅಧಿಕಾರಿಯಾಗಿ ನೇಮಕವಾಗಿ ಸದ್ಯ ಯಾದಗಿರಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.