1 ರಂದು ಭುವನೇಶ್ವರಿ ಭಾವಚಿತ್ರದ ಮೆರವಣಿಗೆ

Revansiddappa Jalade
????????????????????????????????????
Published on

ಬೀದರ್: ಇಲ್ಲಿಯ ಪ್ರತಾಪನಗರದ ಜನಸೇವಾ ಶಿಶು ಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲೆಯು ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನವೆಂಬರ್ 1 ರಂದು ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಿದೆ.

ಮಕ್ಕಳಲ್ಲಿ ನಾಡು, ನುಡಿ ಹಾಗೂ ಸಂಸ್ಕøತಿ ಬಗ್ಗೆ ಅಭಿಮಾನ ಮೂಡಿಸಲು ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.

ಬೆಳಿಗ್ಗೆ 7.30ಕ್ಕೆ ಶಾಲೆಯಲ್ಲಿ ಧ್ವಜಾರೋಹಣ ನಡೆಯಲಿದೆ. ಬೆಳಿಗ್ಗೆ 7.30ಕ್ಕೆ ಅಲಂಕೃತ ವಾಹನದಲ್ಲಿ ಶಾಲೆಯಿಂದ ಆನಂದನಗರ, ಮುಖ್ಯರಸ್ತೆ, ಮಾಧವನಗರ, ಪ್ರತಾಪನಗರ ಮಾರ್ಗವಾಗಿ ಮರಳಿ ಶಾಲೆವರೆಗೆ ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ಜರುಗಲಿದೆ ಎಂದು ಹೇಳಿದ್ದಾರೆ.

ಮಹಾ ಪುರುಷರು, ಸ್ವಾತಂತ್ರ್ಯ ಹೋರಾಟಗಾರರು, ಜ್ಞಾನ ಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿಗಳ ವೇಷಧಾರಿ ಮಕ್ಕಳು ಪ್ರಮುಖ ಆಕರ್ಷಣೆ ಆಗಿರಲಿದ್ದಾರೆ. ಶಾಲಾ ಬ್ಯಾಂಡ್, ಲೇಜಿಮ್, ಡಂಬಲ್ಸ್ ಹಾಗೂ ಇತರ ಕಲಾ ತಂಡಗಳು ಗಮನ ಸೆಳೆಯಲಿವೆ ಎಂದು ತಿಳಿಸಿದ್ದಾರೆ.

8.30ಕ್ಕೆ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಗಣ್ಯರು ಉಪನ್ಯಾಸ ನೀಡಲಿದ್ದಾರೆ. ಮಕ್ಕಳಿಂದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net