ಉನ್ನತ ಶಿಕ್ಷಣ ಪಡೆಯಲು ಸಚಿವರ ಸಲಹೆ

Noubad College - Copy
Published on

ಬೀದರ್: ಇಂದಿನ ಸ್ಪಧ್ಯಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಬೇಕು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಹೇಳಿದರು.

ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿವಿಧ ಸಮಿತಿಗಳ ಚಟುವಟಿಕೆ ಹಾಗೂ 2024-25ನೇ ಸಾಲಿನ ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿ.ಬಿ.ಎ ಹಾಗೂ ಬಿ.ಸಿ.ಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಉನ್ನತ ಶಿಕ್ಷಣ ಪೂರೈಸಿದವರಿಗೆ ಬಹಳಷ್ಟು ಉದ್ಯೋಗ ಅವಕಾಶಗಳು ಇವೆ ಎಂದು ತಿಳಿಸಿದರು.

ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಿ.ಸಿ.ಎ, ಬಿ.ಬಿ.ಎಂ. ಕೋರ್ಸ್ ಆರಂಭಿಸಿದ್ದು, ವಿದ್ಯಾರ್ಥಿಗಳು ಕೋರ್ಸ್‍ಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರೊ. ಜಯಶ್ರೀ ಪ್ರಭಾ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆ ಮೈಗೂಡಿಸಿಕೊಳ್ಳಬೇಕು ಎಂದರು.

ಕಾಲೇಜಿನ ಸಿಬ್ಬಂದಿ ಕಾರ್ಯದರ್ಶಿ ಪ್ರೊ. ರಾಜಕುಮಾರ ಅಲ್ಲೂರೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬೀದರ್ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಪರಮೇಶ್ವರ್ ನಾಯ್ಕ್ ಉಪಸ್ಥಿತರಿದ್ದರು.

ಕಾಲೇಜಿನ ಸಾಂಸ್ಕøತಿಕ ಸಮಿತಿಯ ಸಂಯೋಜಕಿ ಎಲಿಷಾ ದೇವದಾಸ ಸ್ವಾಗತಿಸಿದರು. ಸಹ ಸಂಯೋಜಕಿ ಪ್ರೊ. ಮಹಾದೇವಿ ಹೆಬ್ಬಾಳೆ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಬಾಲಸುಬ್ರಹ್ಮಣ್ಯಂ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net