

ಬಸವಕಲ್ಯಾಣ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ನೀಲಕಂಠ ರಾಠೋಡ್ ಸೂಚಿಸಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಐದು ಗ್ಯಾರಂಟಿಗಳು ಸರ್ಕಾರದ ಐತಿಹಾಸಿಕ ಯೋಜನೆಗಳಾಗಿವೆ. ಹೀಗಾಗಿ ಅರ್ಹರು ಸದುಪಯೋಗ ಪಡೆದುಕೊಳ್ಳಲು ಅಕಾರಿಗಳು ಅನುಕೂಲ ಮಾಡಿಕೊಡಬೇಕು. ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಬಗೆಹರಿಸಬೇಕು ಎಂದರು.
ವಿಧಾನಸಭೆ ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ಅಧಿಕಾರಕ್ಕೆ ಬಂದ ನಂತರ ನಮ್ಮ ಸರ್ಕಾರ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದೆ. ಈ ಯೋಜನೆಗಳಿಂದ ಅನೇಕ ಕುಟುಂಬಗಳಿಗೆ ನೆರವಾಗಿದೆ ಎಂದು ಹೇಳಿದರು. ತಾಪಂ ಇಒ ರಮೇಶ ಸುಲ್ಪಿ ಇತರರಿದ್ದರು.