ಬಿರಾದಾರಗೆ ಸುವರ್ಣ ಮಹೋತ್ಸವ ಪ್ರಶಸ್ತಿ

Shrikanth biradar
Published on

ಬೀದರ್: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೊಡಮಾಡುತ್ತಿರುವ ಸುವರ್ಣ ಮಹೋತ್ಸವ ಪ್ರಶಸ್ತಿಗೆ ಜಿಲ್ಲೆಯ ಇಬ್ಬರು ಸಾಧಕರು ಆಯ್ಕೆಯಾಗಿದ್ದಾರೆ.

ನಗರದ ಚಿತ್ರಕಲಾ ಶಿಕ್ಷಕ ಶ್ರೀಕಾಂತ ಬಿರಾದಾರ್ (ಚಿತ್ರಕಲೆ ಕ್ಷೇತ್ರ) ಹಾಗೂ ಹುಲಸೂರಿನ ಹಿರಿಯ ಕಲಾವಿದೆ ಚಂದ್ರಕಲಾ ಹಾರಕೂಡೆ (ಜಾನಪದ ಕ್ಷೇತ್ರ) ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶುಕ್ರವಾರ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿಯು 50 ಸಾವಿರ ರೂ. ನಗದು ಮತ್ತು ಫಲಕ ಒಳಗೊಂಡಿದೆ.

ಮೂಲತಃ ಔರಾದ್ ತಾಲೂಕಿನ ಕೌಠಾ(ಕೆ) ಗ್ರಾಮದ ಬಸವನಗರ ನಿವಾಸಿಯಾದ ಶ್ರೀಕಾಂತ ಬಿರಾದಾರ್ ಚಿತ್ರಕಲಾ ಶಿಕ್ಷಕರಾಗಿ ಜಿಲ್ಲೆಯ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ರಾಜ್ಯದ ವಿವಿಧೆಡೆ ಚಿತ್ರಕಲಾ ಪ್ರದರ್ಶನ ಮಾಡಿದ್ದಾರೆ. ಚಿತ್ರಕಲೆ ಜತೆಗೆ ಸಾಹಿತ್ಯ, ಸಂಗೀತ, ನಾಟಕ ಸೇರಿ ನಾನಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ.

ಜಗಜ್ಯೋತಿ ಬಸವೇಶ್ವರ ಕಾಯಕ ಪ್ರಶಸ್ತಿ, ರಾಜ್ಯಮಟ್ಟದ ಉತ್ತಮ ಶಿಕ್ಷಕ, ಡಾ.ಚನ್ನಬಸವಪ ಪಟ್ಟದ್ದೇವರು ಸೇರಿ ನಾನಾ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಚಿತ್ರಕಲಾ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಸುವರ್ಣ ಮಹೋತ್ಸವ ಪ್ರಶಸ್ತಿಗೆ ಸಕರ್ಾರ ಆಯ್ಕೆ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net