ಅಕ್ಷರ ಜ್ಯೋತಿ ಯಾತ್ರೆಗೆ ಚಾಲನೆ ನ.5ರಂದು

Basavakumar Patil - Copy
Published on

ಬೀದರ್: ಕಲ್ಯಾಣ ಕರ್ನಾಟಕ ಪ್ರತಿಷ್ಠಾನ ಹಮ್ಮಿಕೊಂಡಿರುವ 63 ದಿನಗಳ ಅಕ್ಷರ ಜ್ಯೋತಿ ಯಾತ್ರೆಗೆ ನಗರದಲ್ಲಿ ಮಂಗಳವಾರ (ನ.5) ಚಾಲನೆ ಸಿಗಲಿದೆ.

ಬೆಳಿಗ್ಗೆ 11.15ಕ್ಕೆ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕನ್ನಡ ಧ್ವಜ ತೋರಿಸಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಶೈಕ್ಷಣಿಕ ಜಾಗೃತಿ ಹಾಗೂ ಮಕ್ಕಳಲ್ಲಿ ಮೌಲ್ಯ ಬಿತ್ತಲು ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ತಿಳಿಸಿದ್ದಾರೆ.

ಯಾತ್ರೆಯು ರಾಜ್ಯದ ಎಲ್ಲ ಜಿಲ್ಲೆ ಹಾಗೂ ಗಡಿ ಪ್ರದೇಶಗಳಲ್ಲಿ ಸಂಚರಿಸಲಿದೆ. ಜನವರಿ 10 ರಂದು ಬೀದರ್‍ನಲ್ಲಿ ಸಮಾರೋಪಗೊಳ್ಳಲಿದೆ ಎಂದು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರತಿಷ್ಠಾನವು ಶೈಕ್ಷಣಿಕ ಜಾಗೃತಿ ಹಾಗೂ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಭಾಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. 2014 ರಲ್ಲಿ ಪ್ರತಿಷ್ಠಾನದಿಂದ ಜಿಲ್ಲೆಯಲ್ಲಿ 60 ದಿನಗಳ ಅಕ್ಷರ ಜ್ಯೋತಿ ಯಾತ್ರೆ ನಡೆಸಲಾಗಿತ್ತು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net