ಬೀದರ್ ಮುಖಂಡರಿಂದ ಶಿಗ್ಗಾವಿಯಲ್ಲಿ ಪ್ರಚಾರ

Bidar Congress Leaders Prachar At Huralikoppi
Published on

ಬೀದರ್: ಜಿದ್ದಾಜಿದ್ದಿನ ಪೈಪೋಟಿಯಿಂದಾಗಿ ತೀವ್ರ ಕುತೂಹಲ ಕೆರಳಿಸಿರುವ ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಕಾಂಗ್ರೆಸ್ ಮುಖಂಡರೂ ಮತದಾರರ ಮನವೊಲಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಬೀದರ್ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರ ನೇತೃತ್ವದಲ್ಲಿ ಮಂಗಳವಾರ ಬಂಕಾಪುರ, ಹುರಳಿಕುಪ್ಪಿ ಹಾಗೂ ಹುಲಗೂಡ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿ ಯಾಸೀರ್ ಅಹಮ್ಮದ್ ಖಾನ್ ಪಠಾಣ್ ಪರ ಪ್ರಚಾರ ನಡೆಸಿದರು.

ಮುಖಂಡರಾದ ಹಣಮಂತರಾವ್ ಚವಾಣ್, ನಾಗಶೆಟ್ಟಿ ಪಾಟೀಲ, ಉದಯ ವಾರದ, ತುಕಾರಾಮ ಕರಾಟೆ, ನರಸಪ್ಪ ಯಾಕತಪುರ ಮೊದಲಾದವರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net