ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶುಭ ಕೋರಿದ ಚವ್ಹಾಣ್

chavan
Published on

ಔರಾದ್: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ಜನ್ಮದಿನದ ನಿಮಿತ್ತ ಶಾಸಕ ಪ್ರಭು ಚವ್ಹಾಣ್ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದರು.

ರಾಜ್ಯದ ಜನಪ್ರಿಯ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹಾದಿಯಲ್ಲಿ ಸಾಗುತ್ತಿರುವ ವಿಜಯೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಶಾಸಕರಾಗಿ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಿಂದೆ ಬಿಜೆಪಿ ಉಪಾಧ್ಯಕ್ಷರಾಗಿ ಮತ್ತು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು, ರಾಜ್ಯಾಧ್ಯಕ್ಷರ ಸ್ಥಾನವನ್ನು ಯಶಸ್ವಿಯಾಗಿ ನಿಭಾಯಿಸುತ್ತಿರುವುದಕ್ಕೆ ಖುಷಿ ಇವಿದೆ. ಯುವಜನತೆ ಒಳಗೊಂಡು ಎಲ್ಲ ವರ್ಗದವರ ನೆಚ್ಚಿನ ನಾಯಕರಾಗಿರುವ ತಮ್ಮ ನೇತೃತ್ವದಲ್ಲಿ ಪಕ್ಷವು ಉತ್ತುಂಗಕ್ಕೆ ತಲುಪಲಿ, ದೇವರು ಆಯುಷ್ಯ, ಆರೋಗ್ಯ, ಸುಖ, ಸಮೃದ್ಧಿಯನ್ನು ನೀಡಲಿ ಎಂದು ಶಾಸಕ ಚವ್ಹಾಣ್ ಶುಭ ಕೋರಿದರು.

ಇದೇ ವೇಳೆ ಔರಾದ್ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಬಿಜೆಪಿ ಸದಸ್ಯತ್ವ ಅಭಿಯಾನವು ಔರಾದ್ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸದಸ್ಯರ ನೋಂದಣಿಯಾಗಿದೆ. ಉಸ್ತುವಾರಿ ವಹಿಸಿದ ನಂತರ ಭಾಲ್ಕಿ ಮತ್ತು ಬೀದರ್ ಉತ್ತರ ಕ್ಷೇತ್ರದಲ್ಲಿಯೂ ಸುಧಾರಣೆ ಕಾಣಿಸಿದೆ ಎಂದು ಶಾಸಕರ ಕೆಲಸಕ್ಕೆ ರಾಜ್ಯಾಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕಿ ಬಾತ್ ಕಾರ್ಯಕ್ರಮದ ವೀಕ್ಷಣೆಯೂ ಔರಾದ ಕ್ಷೇತ್ರ ಮುಂಚೂಣಿಯಲ್ಲಿದೆ. ಪಕ್ಷ ಎಲ್ಲ ಕಾರ್ಯಚಟುವಟಿಕೆಗಳು ಅಚ್ಚುಕಟ್ಟಾಗಿ ನಡೆಸಲಾಗುತಿದೆ. ಕೆಲಸಗಳು ಹೀಗೆಯೇ ಮುಂದುವರೆಯಲಿ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net