ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ 11ಕ್ಕೆ

Sidramappa Andure
Published on

ಬೀದರ್: ರೈತರ ಹೊಲದ ಪಹಣಿಯಲ್ಲಿ ವಕ್ ಹೆಸರು ನಮೂದಿಸಿದ್ದು ಖಂಡಿಸಿ ನ.11ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ತಿಳಿಸಿದ್ದಾರೆ.

ನಗರದ ಗಣೇಶ ಮೈದಾನದಲ್ಲಿ ರೈತರು ಜಮಾಯಿಸಿ ಅಲ್ಲಿಂದ ರ್ಯಾಲಿ ಮೂಲಕ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಹೋರಾಟದಲ್ಲಿ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net