

ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ಮತ್ತು ಆಡಳಿತಾಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಕೊಳ್ಳಬೇಕು ಎಂದು ಭಾರತೀಯ ಮಜ್ದೂರ್ ಸಂಘದ ವಿಭಾಗ ಪ್ರಧಾನ ಕಾರ್ಯದರ್ಶಿ ಗಣಪತಿ ಸಕ್ರಮಪ್ಪನೋರ್ ಆಗ್ರಹಿಸಿದ್ದಾರೆ.
ಈ ಕುರಿತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದು, ವಿಭಾಗೀಯ ನಿಯಂತ್ರಣಾಧಿಕಾರಿ ಮತ್ತು ಆಡಳಿತಾಕಾರಿಗಳಿಗೆ ಭೇಟಿಯಾಗಿ ಸಂಸ್ಥೆಯ ಚಾಲಕ, ನಿರ್ವಾಹಕರ ತೀವ್ರ ಸಮಸ್ಯೆಗಳ ಕುರಿತು ಮಾಹಿತಿ ನೀಡಿ ರಜೆಗಾಗಿ ಕೋರಲಾಗಿತ್ತು. ಆದರೆ ನಮ್ಮ ಮನವಿಗೆ ಸ್ಪಂದಿಸದ ಅಧಿಕಾರಿಗಳು ಸಂಘದ ಪ್ರತಿನಿಧಿಗಳೊಂದಿಗೆ ಮನಬಂದಂತೆ ವರ್ತಿಸಿ ಅವಮಾನಿಸಿದ್ದಾರೆ ಎಂದು ದೂರಿದ್ದಾರೆ. ಈ ಬಗ್ಗೆ ಮನವಿ ಸಲ್ಲಿಸಿದರು ಕ್ರಮಕೈಗೊಂಡಿಲ್ಲ. ಒಂದು ವಾರದ ಒಳಗಾಗಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳದಿದ್ದಲ್ಲಿ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.