ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ

Sanjeevkumar Atiwale
Published on

ಬೀದರ್: ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಕನ್ನಡ ರಾಜ್ಯೋತ್ಸವ ನಿಮಿತ್ತ ಉಪನ್ಯಾಸ, ಸಾಂಸ್ಕೃತಿಕ ಮತ್ತು ಸನ್ಮಾನ ಸಮಾರಂಭವನ್ನು ನ.10ರಂದು ಮಧ್ಯಾಹ್ನ 3ಕ್ಕೆ ಇಲ್ಲಿನ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವಕುಮಾರ ಅತಿವಾಳೆ ತಿಳಿಸಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್.ನಿರಗುಡಿ ಉದ್ಘಾಟಿಸುವರು. ಶ್ರೀ ಡಾ.ರಾಜಶೇಖರ ಶಿವಾಚಾರ್ಯ ಸಾನ್ನಿಧ್ಯ, ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವಕುಮಾರ ಅತಿವಾಳೆ ಅಧ್ಯಕ್ಷತೆ ವಹಿಸುವರು. ಶಿಕ್ಷಕ ಪ್ರಕಾಶ ದೇಶಮುಖ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಪುಂಡಲೀಕರಾವ ಇಟಕಂಪಳ್ಳಿ, ಸುರೇಶ ಚನ್ನಶೆಟ್ಟಿ, ಸಿದ್ರಾಮ ಸಿಂಧೆ, ಭಾರತಿ ವಸ್ತ್ರದ್, ಡಿ.ನಿಜಾಮುದ್ದೀನ್, ಸುಮಂತ ಕಟ್ಟಿಮನಿ, ವಿಜಯಕುಮಾರ ಸೋನಾರೆ, ಸಿದ್ದಪ್ಪ ಮೂಲಗೆ ಇತರರು ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 69 ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುವುದು. ಸಾಹಿತ್ಯ, ಸಂಗೀತ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net