ಕ.ಕ. ವಿಕಾಸದಲ್ಲಿ ಶಿಕ್ಷಕರ ಪಾತ್ರ ಉಪನ್ಯಾಸ 11ಕ್ಕೆ

Revansiddappa Jalade
????????????????????????????????????
Published on

ಬೀದರ್: ಭಾರತೀಯ ಸಂಸ್ಕೃತಿ ಉತ್ಸವ ನಿಮಿತ್ತ ನಗರದ ಬಸವೇಶ್ವರ ಬಿ.ಎಡ್. ಕಾಲೇಜಿನಲ್ಲಿ ನವೆಂಬರ್ 11 ರಂದು ಮಧ್ಯಾಹ್ನ 2.45ಕ್ಕೆ ಕಲ್ಯಾಣ ಕರ್ನಾಟಕ ಸಮಗ್ರ ವಿಕಾಸದಲ್ಲಿ ಶಿಕ್ಷಕರ ಪಾತ್ರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ ಉದ್ಘಾಟಿಸುವರು. ಬೆಂಗಳೂರಿನ ಶಿಕ್ಷಣ ತಜ್ಞೆ ಲೀಲಾ ಮಲ್ಲಿಕಾರ್ಜುನ ಕಾರಟಗಿ ಮುಖ್ಯ ಉಪನ್ಯಾಸ ನೀಡುವರು. ಕಾಲೇಜು ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಕನಕಟ್ಟೆ ಅಧ್ಯಕ್ಷತೆ ವಹಿಸುವರು.

ವಿಕಾಸ ಅಕಾಡೆಮಿ ಜಿಲ್ಲಾ ಘಟಕದ ಅಧ್ಯಕ್ಷ, ನಿವೃತ್ತ ಕರ್ನಲ್ ಶರಣಪ್ಪ ಸಿಕೇನಪುರೆ ಅತಿಥಿಗಳಾಗಿ ಪಾಲ್ಗೊಳ್ಳುವರು. ಉಪನ್ಯಾಸಕಿ ವೀಣಾ ಜಲಾದೆ ನಿರೂಪಿಸುವರು.

ವಿಕಾಸ ಅಕಾಡೆಮಿ ಹಾಗೂ ಬಸವೇಶ್ವರ ಬಿ.ಎಡ್. ಕಾಲೇಜು ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಸಕ್ತ ಶಿಕ್ಷಕ, ಶಿಕ್ಷಕಿಯರು ಭಾಗವಹಿಸಬಹುದು ಎಂದು ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net