

ಬೀದರ್: ಅನುಭವ ಮಂಟಪ ತಿಂಗಳ ಕಾರ್ಯಕ್ರಮ ಮತ್ತು 69ನೇ ಕರ್ನಾಟಕ ರಾಜ್ಯೋತ್ಸವ ನ.11 (ಸೋಮವಾರ) ರಂದು ಸಂಜೆ 6.30ಕ್ಕೆ ಇಲ್ಲಿನ ವಿದ್ಯಾನಗರ ಬಡಾವಣೆಯಲ್ಲಿನ ಡಾ.ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ಆಯೋಜಿಸಲಾಗಿದೆ. ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು, ಶ್ರೀ ಗುರುಬಸವ ಪಟ್ಟದ್ದೇವರು, ಶ್ರೀ ಮಹಾಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ.ಜಗನ್ನಾಥ ಹೆಬ್ಬಾಳೆ ಉದ್ಘಾಟಿಸುವರು. ಪ್ರೊ.ಎಸ್.ಬಿ. ಬಿರಾದಾರ್ ಅಧ್ಯಕ್ಷತೆ ವಹಿಸುವರು. ಶಿವಸ್ವಾಮಿ ಚಿನಕೇರಾ ಉಪನ್ಯಾಸ ನೀಡುವರು. ವಿವಿಧ ಪ್ರಶಸ್ತಿ ಪುರಸ್ಕೃತರಾದ ಹೀರಾಚಂದ ವಾಘಮಾರೆ, ನರಸಿಂಹಲು ಡೊಪ್ಪುರ್, ಶ್ರೀಕಾಂತ ಬಿರಾದಾರ್, ಅಶೋಕ ದಿಡಗೆ ಇತರರಿಗೆ ವಿಶೇಷ ಸನ್ಮಾನ ನಡೆಯಲಿದೆ ಎಂದು ಪ್ರಸಾದ ನಿಲಯದ ಸಂಚಾಲಕ ಉಮಾಕಾಂತ ಮೀಸೆ ತಿಳಿಸಿದ್ದಾರೆ.