ಡಾ.ಪಟ್ಟದ್ದೇವರು ಪುಸ್ತಕ ಬಿಡುಗಡೆ

Basavling Pattaddevaru
Published on

ಬೀದರ್: ಹಿರಿಯ ಸಾಹಿತಿ ಪಂಚಾಕ್ಷರಿ ಪುಣ್ಯಶೆಟ್ಟಿ ರಚಿತ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಪುಸ್ತಕ ಬಿಡುಗಡೆ ಕಾರ್ಯಕ್ರಮ ನಗರದ ಘಾಳೆ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ 6ಕ್ಕೆ ಆಯೋಜಿಸಲಾಗಿದೆ.

ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು, ಶ್ರೀ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸುವರು. ಬೀದರ್ ವಿಶ್ವವಿದ್ಯಾಲಯ ಕುಲಪತಿ ಡಾ.ಬಿ.ಎಸ್.ಬಿರಾದಾರ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಅಧ್ಯಕ್ಷತೆ ವಹಿಸುವರು. ಡಾ. ಈಶ್ವರಯ್ಯ ಕೊಡಂಬಲ್, ಶರಣಪ್ಪ ಮಿಠಾರೆ, ಶಿವರಾಜ ಪಾಟೀಲ್, ಗಣೇಶ ಕೆ. ಜೋಜನೆ, ಕಾವೇರಿ ಪಾಟೀಲ್ ಇತರರು ಪಾಲ್ಗೊಳ್ಳುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net