

ಬೀದರ್: ತಾಲೂಕಿನ ಜನವಾಡ ಸಮೀಪದ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಸಂಸ್ಥಾಪಕ ಅಧ್ಯಕ್ಷ ದಿ.ಡಾ.ಗುರುಪಾದಪ್ಪ ನಾಗಮಾರಪಳ್ಳಿ ಅವರ ಜನ್ಮ ದಿನ ಕಾರ್ಯಕ್ರಮ ನ.11ರಂದು ಬೆಳಗ್ಗೆ 11.11ಕ್ಕೆ ಕಾರ್ಖಾನೆ ಆವರಣದಲ್ಲಿ ನಡೆಯಲಿದೆ. ರೈತರು, ನಾಗಮಾರಪಳ್ಳಿ ಹಿತೈಷಿಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕಾರ್ಖಾನೆ ಅಧ್ಯಕ್ಷ ಡಿ.ಕೆ. ಸಿದ್ರಾಮ ಕೋರಿದ್ದಾರೆ.