

ಬೀದರ್: ವಕ್ ಹೆಸರಿನಲ್ಲಿ ರೈತರ ಭೂಮಿ, ಮಠ-ಮಂದಿರ, ಸಾರ್ವಜನಿಕರ ಜಾಗ ಕಬಳಿಸುತ್ತಿರುವುದನ್ನು ಖಂಡಿಸಿ ನಮ್ಮ ಭೂಮಿ-ನಮ್ಮ ಹಕ್ಕು ಘೋಷವಾಕ್ಯದಡಿ ಶುಕ್ರವಾರ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿರುವ ಹೋರಾಟಕ್ಕೆ ಕನ್ನಡಾಂಬೆ ಗೆಳೆಯರ ಬಳಗ ಸಂಪೂರ್ಣ ಬೆಂಬಲ ಸೂಚಿಸಿದೆ ಎಂದು ಬಳಗದ ಅಧ್ಯಕ್ಷ ವಿರೂಪಾಕ್ಷ ಗಾದಗಿ ತಿಳಿಸಿದ್ದಾರೆ.
ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.