ಮಕ್ಕಳಿಗೆ ಸಂಸ್ಕಾರ ಅಗತ್ಯ

Indirabai Shetkar School Photo-2 - Copy
Published on

ಬೀದರ್: ಪ್ರಸ್ತುತ ಮಕ್ಕಳಿಗೆ ಉತ್ತಮ ಸಂಸ್ಕಾರದ ಅಗತ್ಯವಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಮೇಲ್ವಿಚಾರಕಿ ಕರುಣಾ ಬಂಕುರ ನುಡಿದರು.

ಇಲ್ಲಿಯ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶಕ್ಕೆ ಸತ್ಪ್ರಜೆಗಳನ್ನು ನೀಡುವ ಗುರುತರ ಜವಾಬ್ದಾರ ಪಾಲಕರು ಹಾಗೂ ಶಿಕ್ಷಕರ ಮೇಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ ಮಾತನಾಡಿ, ಮುತ್ತು, ರತ್ನ, ವಜ್ರ, ವೈಡುರ್ಯಗಳಿಗಿಂತ ಸುಸಂಸ್ಕøತ ಪ್ರಜೆಗಳೇ ದೇಶದ ನಿಜವಾದ ಸಂಪತ್ತು ಎಂದು ಹೇಳಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟುಕೊಳ್ಳಬೇಕು. ಪರಿಶ್ರಮ ವಹಿಸಿ ವ್ಯಾಸಂಗ ಮಾಡಬೇಕು ಎಂದು ತಿಳಿಸಿದರು.

ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ ಮಾತನಾಡಿ, ಮಕ್ಕಳ ಭವಿಷ್ಯ ಉಜ್ವಲಗೊಳಿಸುವಲ್ಲಿ ಪಾಲಕರ ಜವಾಬ್ದಾರಿ ಬಹಳ ಪ್ರಮುಖವಾಗಿದೆ ಎಂದರು.

ಮೊಬೈಲ್ ಚಟದಿಂದ ಆಗುವ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳು ಪ್ರದರ್ಶಿಸಿದ ಕಿರು ನಾಟಕ ಗಮನ ಸೆಳೆಯಿತು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಪ್ರದಾನ ಮಾಡಲಾಯಿತು.

ಸಿದ್ಧಾರೂಢ ಪದವಿ ಕಾಲೇಜು ಪ್ರಾಚಾರ್ಯ ನಾಗಪ್ಪ ಜಾನಕನೋರ, ವಿದ್ಯಾರ್ಥಿ ಪ್ರತಿನಿಧಿಗಳಾದ ಲತಾ, ಶರಣು ಉಪಸ್ಥಿತರಿದ್ದರು. ಶಿಕ್ಷಕ ನಾಗನಾಥ ಬಿರಾದಾರ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net