ರೋಗಿಗಳಿಗೆ ಆಹಾರ ಪೊಟ್ಟಣ ವಿತರಣೆ

Priyank Kharge Birthday Celebration
Published on

ಬೀದರ್: ಇಂಡಿಯನ್ ಕ್ರಿಶ್ಚಿಯನ್ ವೆಲ್‍ಫೇರ್ ಅಸೋಸಿಯೇಷನ್ ರೋಗಿಗಳು ಹಾಗೂ ಸಾರ್ವಜನಿಕರಿಗೆ ಆಹಾರ ಪೊಟ್ಟಣ ವಿತರಿಸುವ ಮೂಲಕ ನಗರದಲ್ಲಿ ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನ ವಿಶಿಷ್ಟವಾಗಿ ಆಚರಿಸಿತು.

ಅಸೋಸಿಯೇಷನ್ ಪದಾಧಿಕಾರಿಗಳು ಬ್ರಿಮ್ಸ್ ಆಸ್ಪತ್ರೆ ಆವರಣದಲ್ಲಿ ಜನ್ಮದಿನದ ನಿಮಿತ್ತ ಕೇಕ್ ಕತ್ತರಿಸಿದರು. ಬಳಿಕ ರೋಗಿಗಳು ಹಾಗೂ ಸಾರ್ವಜನಿಕರಿಗೆ ಆಹಾರ ಪೊಟ್ಟಣ ವಿತರಿಸಿದರು.

ಪ್ರಿಯಾಂಕ್ ಖರ್ಗೆ ಅವರು ಜಿಲ್ಲೆಯ ಮೊಮ್ಮಗ ಆಗಿದ್ದಾರೆ. ನಿರಂತರ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಸಾಮಾಜಿಕ ಚಟುವಟಿಕೆಯೊಂದಿಗೆ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದು ಇಂಡಿಯನ್ ಕ್ರಿಶ್ಚಿಯನ್ ವೆಲ್‍ಫೇರ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಸಂಜಯ್ ಜಾಗೀರದಾರ್ ನುಡಿದರು.

ಪ್ರಿಯಾಂಕ್ ಖರ್ಗೆ ಅವರಿಗೆ ರಾಜಕೀಯದಲ್ಲಿ ಇನ್ನೂ ಉಜ್ವಲ ಭವಿಷ್ಯ ಇದೆ ಎಂದು ತಿಳಿಸಿದರು.

ಅಸೋಸಿಯೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್ ತಾಜಲಾಪುರ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಾಣಿ, ಪ್ರಮುಖರಾದ ಸಾಲೋಮನ್ ಡೇವಿಡ್, ಪಿಂಟು ಜಾಗೀರದಾರ್, ಸಂತೋಷ್, ಡ್ಯಾನಿ, ವಿನೋದ್, ರಾಜು, ಸ್ಟೈಫನ್, ಪ್ರಜ್ವಲ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net