ಹೊಸ ಕೈಗಾರಿಕೆ ಪ್ರದೇಶ ಸ್ಥಾಪನೆಗೆ ಒತ್ತಾಯ

Tanaji Sagar 22
Published on

ಬೀದರ್: ನವೀನ ಕೈಗಾರಿಕೆಗಳ ಆರಂಭಕ್ಕೆ ಪೂರಕವಾಗಿ ಬೀದರ್ ಸಮೀಪ ಹೊಸ ಕೈಗಾರಿಕೆ ಪ್ರದೇಶ ಸ್ಥಾಪಿಸಬೇಕು ಎಂದು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ತಾನಾಜಿ ಸಗರ್ ಒತ್ತಾಯಿಸಿದ್ದಾರೆ.

ಕೊಳಾರ(ಕೆ) ಕೈಗಾರಿಕೆ ಪ್ರದೇಶದಲ್ಲಿ ಈಗಾಗಲೇ ಸಾಕಷ್ಟು ಕೈಗಾರಿಕೆಗಳು ಇವೆ. ನೂತನ ಕೈಗಾರಿಕೆಗಳ ಸ್ಥಾಪನೆಗೆ ಸ್ಥಳಾವಕಾಶ ಇಲ್ಲವಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚು ಹೆಚ್ಚು ಕೈಗಾರಿಕೆಗಳು ಆರಂಭಗೊಂಡರೆ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಸಿಗಲಿದೆ. ಜಿಲ್ಲೆಯ ಆರ್ಥಿಕ ಅಭಿವೃದ್ಧಿಯೂ ಆಗಲಿದೆ. ಹೀಗಾಗಿ, ಹೊಸ ಕೈಗಾರಿಕೆ ಪ್ರದೇಶ ಸ್ಥಾಪಿಸಿ, ಹೊಸ ಉದ್ಯಮ ಪ್ರಾರಂಭಿಸುವವರಿಗೆ ಸಬ್ಸಿಡಿ ಮತ್ತಿತರ ಸೌಲಭ್ಯಗಳ ಮೂಲಕ ಉತ್ತೇಜನ ನೀಡಬೇಕು ಎಂದು ಹೇಳಿದ್ದಾರೆ.

ಕೊಳಾರ(ಕೆ) ಕೈಗಾರಿಕಾ ಪ್ರದೇಶದಲ್ಲಿ ಇರುವ ಸರ್ಕಾರಿ ಸ್ವಾಮ್ಯದ ಅನೇಕ ಕೈಗಾರಿಕೆಗಳು ಮುಚ್ಚಿದ್ದು, ಅವುಗಳನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net