ಪೊಲೀಸ್ ಕ್ರೀಡಾಕೂಟ 25ಕ್ಕೆ

Published on

ಬೀದರ್: ಜಿಲ್ಲಾ ಪೊಲೀಸ್ ನಿಂದ ಮೂರು ದಿನ ಆಯೋಜಿಸಿದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ ಸಮಾರಂಭ ಸೋಮವಾರ (ನ.25) ಬೆಳಗ್ಗೆ 9ಕ್ಕೆ ಇಲ್ಲಿನ ಎಸ್ಪಿ ಕಚೇರಿಯ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ. ಖ್ಯಾತ ಕ್ರಿಕೆಟ್ ಪಟು ದೊಡ್ಡ ಗಣೇಶ ಉದ್ಘಾಟಿಸುವರು. ಜಿಲ್ಲಾಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಡಾ.ಗಿರೀಶ್ ಬದೋಲೆ, ಎಸ್ಪಿ ಪ್ರದೀಪ್ ಗುಂಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ. ಪಾಲ್ಗೊಳ್ಳುವರು. ನ.27ರಂದು ಸಂಜೆ 4ಕ್ಕೆ ಸಮಾರೋಪ ನಡೆಯಲಿದ್ದು, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಅಜಯ ಹಿಲೋರಿ ಪಾಲ್ಗೊಳ್ಳುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net