ಜಿಲ್ಲಾಮಟ್ಟದ ಸಂಗೀತ ಉತ್ಸವ 29ರಂದು

Mallikarjun Nagmarpalli-1 - Copy
Published on

ಬೀದರ್: ಸಪ್ತಸ್ವರ ಕಲಾ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇಲ್ಲಿಯ ಕಿತ್ತೂರ ರಾಣಿ ಚನ್ನಮ್ಮ ವೃತ್ತ ಸಮೀಪದ ಮಹಾಲಕ್ಷ್ಮಿ ಸಭಾಂಗಣದಲ್ಲಿ ನ. 29 ರಂದು ಸಂಜೆ 4.30ಕ್ಕೆ ಜಿಲ್ಲಾಮಟ್ಟದ ಸಂಗೀತ ಉತ್ಸವ ಹಾಗೂ ಜಾನಪದ ಸಂಭ್ರಮ ಹಮ್ಮಿಕೊಂಡಿದೆ.

ಕನಾಟಕ ಜಾನಪದ ಕಲಾ ಪ್ರಶಸ್ತಿ ಪುರಸ್ಕೃತ ಪುಂಡಲೀಕರಾವ್ ಪಾಟೀಲ ಗುಮ್ಮಾ ಉದ್ಘಾಟಿಸುವರು. ಜನವಾಡದ ಶಿವ ಪಾರ್ವತಿ ಮಂದಿರದ ಅಧ್ಯಕ್ಷ ಬಸವರಾಜ ಗುರೂಜಿ ಸಾನಿಧ್ಯ ವಹಿಸುವರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಕ.ಸಾ.ಪ. ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ. ಸಂಜೀವಕುಮಾರ ಅತಿವಾಳೆ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ ಮುಖ್ಯ ಅತಿಥಿಗಳಾಗಿ, ಕಲಾವಿದ ಶಂಭುಲಿಂಗ ವಾಲ್ದೊಡ್ಡಿ, ಕ.ಸಾ.ಪ. ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮನೋಹರ, ನಾಟ್ಯಶ್ರೀ ನೃತ್ಯಾಲಯದ ನಿರ್ದೇಶಕಿ ರಾಣಿ ಸತ್ಯಮೂರ್ತಿ, ಕೊಳಾರ(ಕೆ) ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ ಶೇರಿಗರ, ಸಪ್ತಸ್ವರ ಕಲಾ ಸಂಸ್ಥೆಯ ಕಾರ್ಯದರ್ಶಿ ಮೀನಾಕ್ಷಿ ಮಲ್ಲಿಕಾರ್ಜುನ ಅತಿಥಿಗಳಾಗಿ ಪಾಲ್ಗೊಳ್ಳುವರು.

ಸಪ್ತಸ್ವರ ಕಲಾ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ನಾಗಮಾರಪಳ್ಳಿ ಅಧ್ಯಕ್ಷತೆ ವಹಿಸುವರು.

ಸಂಗೀತ ಕಲಾವಿದರು ಸೇರಿದಂತೆ ಅನೇಕ ಕಲಾವಿದರು ಕಲಾ ಪ್ರದರ್ಶನ ನೀಡಲಿದ್ದಾರೆ. ಕಲಾಸಕ್ತರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಮಲ್ಲಿಕಾರ್ಜುನ ನಾಗಮಾರಪಳ್ಳಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net