

ಬೀದರ್: ವಿಭಾಗ ಮಟ್ಟದ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ, ವಯೋನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಂಗಶೆಟ್ಟಿ ಹಲಬರ್ಗೆ ಅವರ ಅಭಿನಂದನಾ ಸಮಾರಂಭ ಶನಿವಾರ (ನ.30) ಬೆಳಗ್ಗೆ 10.15ಕ್ಕೆ ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು, ಶ್ರೀ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಪೌರಾಡಳಿತ ಸಚಿವ ರಹೀಮ್ಖಾನ್, ಸಂಸದ ಸಾಗರ್ ಖಂಡ್ರೆ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದ ಅರಳಿ, ಬಿಡಿಎ ಮಾಜಿ ಅಧ್ಯಕ್ಷ ಬಾಬು ವಾಲಿ ಇತರರು ಪಾಲ್ಗೊಳ್ಳುವರು.