ಸಚಿವ ತಂಗಡಗಿಗೆ ಆಹ್ವಾನ

dinada chitra
Published on

ಬೀದರ್: ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದಿಂದ 2025ರ ಜ.11, 12ರಂದು ಬೀದರ್ ನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಸೂಫಿ ಸಂತರ ಸಾಂಸ್ಕೃತಿಕ ಉತ್ಸವ ಹಾಗೂ ತತ್ವ ಪದಕಾರರ ಭಜನೆ ಸ್ಪರ್ಧೆ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸುವಂತೆ ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರನ್ನು ಸನ್ಮಾನಿಸಿ ಆಹ್ವಾನ ನೀಡಲಾಯಿತು.

ಒಕ್ಕೂಟ ಅಧ್ಯಕ್ಷ ವಿಜಯಕುಮಾರ ಸೋನಾರೆ, ಅಂಬರೀಶ್ ಮಲ್ಲೇಶಿ, ಚಂದ್ರಕಾಂತ ಹಳ್ಳಿಖೇಡಕರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net