ಪತ್ರಕರ್ತರಿಗೆ ನಿವೇಶನ ಒದಗಿಸಿ

Press memo
Published on

ಬೀದರ್: ಜಿಲ್ಲೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಕರ್ತರಿಗೆ ಸರ್ಕಾರದಿಂದ ನಿವೇಶನ ಒದಗಿಸಬೇಕು ಎಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ಮನವಿ ಮಾಡಿದೆ.

ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿಪತ್ರ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ಬೀದರ್ ಅಭಿವೃದ್ಧಿ ಹೊಂದುತ್ತಿರುವ ನಗರ. ನಿವೇಶನಗಳು ಸಾಕಷ್ಟು ದುಬಾರಿಯಾಗಿವೆ. ಇಂಥ ಸಂದರ್ಭದಲ್ಲಿ ಪತ್ರಕರ್ತರಿಂದ ನಿವೇಶನ ಖರೀದಿಸಲು ಸಾಧ್ಯವಿಲ್ಲ ಎಂದು ಗಮನ ಸೆಳೆದರು.

ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಪತ್ರಕರ್ತರಿಗೆ ನಿವೇಶನದ ಅಗತ್ಯವಿದೆ. ಈ ನಿಟ್ಟಿನಲ್ಲಿ ನಗರದ ಒಂದು ಕಡೆ ಐದು ಎಕರೆ ಜಮೀನು ಮಂಜೂರು ಮಾಡಿ ನಿವೇಶನ ದೊರಕಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದರು.

ಸಂಘದ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ್, ಮಾಜಿ ಜಿಲ್ಲಾಧ್ಯಕ್ಷ ಬಾಬು ವಾಲಿ, ಆನಂದ ದೇವಪ್ಪ, ಅಶೋಕಕುಮಾರ ಕರಂಜಿ, ಪ್ರದೀಪ ಬಿರಾದಾರ್, ಬಸವರಾಜ ಪವಾರ್, ಶ್ರೀನಿವಾಸ ಚೌದ್ರಿ, ಸುನೀಲ ಕುಲಕರ್ಣಿ, ಸುನೀಲಕುಮಾರ ಹೊನ್ನಾಳೆ, ಅಮರೇಶ್ವರ, ಪೃಥ್ವಿರಾಜ್ ಎಸ್., ಸ್ವಾಮಿದಾಸ ನಾಗೂರೆ, ಜಾಜ್೯ ಫರ್ನಾಂಡೀಸ್ ಇತರರಿದ್ದರು. ಪೌರಾಡಳಿತ ಸಚಿವ ರಹೀಮ್ ಖಾನ್ ಅವರಿಗೂ ಪ್ರತ್ಯೇಕ ಮನವಿಪತ್ರ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net